×
Ad

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಳಕೆಯಾಗದ ಹಣದಲ್ಲಿ ಕನ್ನಡ ಭವನ ನಿರ್ಮಾಣ: ಆದೇಶ

Update: 2025-06-18 19:42 IST
ಸಾಂದರ್ಭಿಕ ಚಿತ್ರ

ಬೆಂಗಳೂರು: ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೀಸಲಿಟ್ಟ ಅನುದಾನದಲ್ಲಿ ಬಳಕೆಯಾಗದೆ ಇರುವ 2 ಕೋಟಿ ರೂ.ಗೂ ಅಧಿಕ ಹಣದಲ್ಲಿ ಕನ್ನಡ ಭವನವನ್ನು ನಿರ್ಮಾಣ ಮಾಡಿಕೊಳ್ಳಲು ಸರಕಾರ ಅನುಮತಿ ನೀಡಿದೆ.

ಈ ಸಂಬಂಧ ರಾಜ್ಯ ಸರಕಾರವು ಆದೇಶ ಹೊರಡಿಸಿದ್ದು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಮೂಲಗಳಿಂದ ಹಣ ಸಂಗ್ರಹಿಸಲಾಗಿತ್ತು. ಈ ಹಣದಲ್ಲಿ ಬಳಕೆಯಾಗದೆ ಇರುವ 2,18,68,392 ರೂ.ಗಳನ್ನು ಮಂಡ್ಯ ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಿಸಲು ಬಳಕೆ ಮಾಡಿಕೊಳ್ಳಬಹುದು ಎಂದು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದೆ.

ಕನ್ನಡ ಭವನ ನಿರ್ಮಾಣದ ಅಂದಾಜು ವೆಚ್ಚ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸರಕಾರಕ್ಕೆ ಸಲ್ಲಿಸಬೇಕು. ಕಾಮಗಾರಿಯನ್ನು ಅನುದಾನದ ಮಿತಿಯಲ್ಲಿಯೇ ಅನುಷ್ಠಾನಗೊಳಿಸಬೇಕು. ಈ ಕುರಿತು ಸರಕಾರ ಹೊರಡಿಸಿದ ಸುತ್ತೋಲೆಗಳಲ್ಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News