×
Ad

ಮಂಡ್ಯ: ಇಬ್ಬರು ಅಧಿಕಾರಿಗಳ ನಿವಾಸಕ್ಕೆ ಲೋಕಾಯುಕ್ತ ದಾಳಿ

Update: 2023-10-30 19:06 IST

ಅಧಿಕಾರಿಯ ನಿವಾಸ 

ಮಂಡ್ಯ, ಅ.30: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಬ್ಬರು ಅಧಿಕಾರಿಗಳ ಜಿಲ್ಲೆಯ ನಿವಾಸಗಳ ಮೇಲೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಇಂಜನಿಯರ್ ಶಶಿಕುಮಾರ್ ಅವರಿಗೆ ಸೇರಿದ ಮಳವಳ್ಳಿ ತಾಲೂಕು ನಂಜೇಗೌಡನದೊಡ್ಡಿ ಗ್ರಾಮದ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಹಲವು ದಾಖಲೆಗಳನ್ನು ಪರಿಶೀಲಿಸಿತು ಎಂದು ವರದಿಯಾಗಿದೆ.

ಮೈಸೂರಿನ ಕೊಳಗೇರಿ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಇಂಜನಿಯರ್ ಆಗಿರುವ ಬಾಲರಾಜು ಅವರ ಮದ್ದೂರು ತಾಲೂಕಿನ ತೈಲೂರು ಗ್ರಾಮದ ನಿವಾಸದ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News