×
Ad

ಮಂಡ್ಯ: ಪಿಯುಸಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ವೀಡಿಯೊ ಚಿತ್ರೀಕರಿಸಿ ಬ್ಲಾಕ್ ಮೇಲ್

Update: 2023-11-10 15:38 IST

ಸಾಂದರ್ಭಿಕ ಚಿತ್ರ

ಮಂಡ್ಯ, ನ.10: ದ್ವಿತೀಯ ಪಿಯುಸಿ ಓದುತ್ತಿದ್ದ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಇಬ್ಬರು ಬಾಲಾಪರಾಧಿಗಳು ಸೇರಿ ಮೂವರು ಆರೋಪಿಗಳನ್ನು ಮದ್ದೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮದ್ದೂರಿನ ಶಿವಪುರದ ಲಾಡ್ಜ್ ಒಂದರಲ್ಲಿ ದುಷ್ಕೃತ್ಯ ಎಸಗಿದ ಮೂವರು, ದೃಶ್ಯಾವಳಿಯನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ಬ್ಲಾಕ್ ಮೇಲ್ ಮಾಡಿದ್ದಲ್ಲದೆ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. 

ಬಾಲಕಿಯ ಪೋಷಕರು ಮದ್ದೂರು ಠಾಣೆಯ ಪೊಲೀಸರಿಗೆ ದೂರು ನೀಡಿದ್ದು, ಪೋಷಕರ ದೂರನ್ನು ಆಧರಿಸಿ, ಮದ್ದೂರು ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿ, ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. 

'ಆರೋಪಿಗಳೆಲ್ಲರೂ ಬಾಲಕಿಯ ಅಕ್ಕಪಕ್ಕದ ಗ್ರಾಮದವರೇ ಆಗಿದ್ದಾರೆ. ಬಾಲಕಿಯನ್ನು ಕರೆದೊಯದ್ದಿದ್ದ ಪ್ರಮುಖ ಆರೋಪಿ ಹಾಗೂ ಆತನ ಗೆಳೆಯ ಬಾಲಕರಾಗಿದ್ದು ಅವರಿಬ್ಬರನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಮತ್ತೊಬ್ಬ ಆರೋಪಿ ಪ್ರಾಪ್ತ ವಯಸ್ಕನಾಗಿದ್ದು ಜೈಲಿಗೆ ಕಳುಹಿಸಲಾಗಿದೆ'

ಎನ್.ಯತೀಶ್- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News