×
Ad

ಸತೀಶ್ ಜಾರಕಿಹೊಳಿ ನಮ್ಮ ಪಕ್ಷದ ನೇತಾರ, ಅವರನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ: ಎಂ.ಬಿ.ಪಾಟೀಲ್‌

Update: 2025-01-24 15:06 IST

 ಎಂ.ಬಿ.ಪಾಟೀಲ್‌

ಬೆಂಗಳೂರು : ʼಕಾಂಗ್ರೆಸ್ ಮುಖಂಡ ಸತೀಶ್‌ ಜಾರಕಿಹೊಳಿ ಪಕ್ಷದ ನೇತಾರರು. ಅವರನ್ನು ರಾಜಕೀಯವಾಗಿ ಯಾರೂ ಮುಗಿಸಲಾರರು. ಅಂತಹ ಆಲೋಚನೆ ಕೂಡ ಯಾರಿಗೂ ಇಲ್ಲ. ಈ ವಿಚಾರವಾಗಿ ಬಿಜೆಪಿಯ ಜನಾರ್ದನ ರೆಡ್ಡಿ ಮಾತನಾಡಿರುವುದು ರಾಜಕೀಯಪ್ರೇರಿತʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಶ್ರೀರಾಮುಲು ಮತ್ತು ರೆಡ್ಡಿ ಅವರ ಸಂಬಂಧ ಈಗ ಹಳಸಿದೆ. ಶ್ರೀರಾಮುಲು ನಮ್ಮ ಪಕ್ಷಕ್ಕೆ ಬರುವ ಆಸಕ್ತಿ ವ್ಯಕ್ತಪಡಿಸಿದರೆ, ಅದರ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ. ಆದರೆ ರೆಡ್ಡಿ ವಿರುದ್ಧ ನಾವೆಲ್ಲರೂ ಹೋರಾಡಿದ್ದೇವೆ. ಹೀಗಾಗಿಯೇ ಹಿಂದೆ ಅವರು ನಮ್ಮ ಪಕ್ಷಕ್ಕೆ ಸೇರಲು ಬಂದರೂ ನಾವು ಅದನ್ನು ಒಪ್ಪಲಿಲ್ಲʼ ಎಂದು ಪಾಟೀಲ್‌ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News