ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್‌ ನಲ್ಲಿ ಶೀಘ್ರ ನೇಮಕಾತಿ ಮುಗಿಸಲು ಸಚಿವ ಎಂ.ಬಿ.ಪಾಟೀಲ್ ಸೂಚನೆ

Update: 2026-07-20 23:17 IST

ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಸರಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (ಎಂಎಸ್‍ಐಎಲ್) ಸಂಸ್ಥೆಯಲ್ಲಿ ಪ್ರಗತಿಯಲ್ಲಿರುವ 62 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆದಷ್ಟು ಶೀಘ್ರವಾಗಿ ಮುಗಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ನಿರ್ದೇಶನ ನೀಡಿದ್ದಾರೆ.

ಸೋಮವಾರ ಈ ಸಂಬಂಧ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ಮತ್ತು ಇತರ ಅಧಿಕಾರಿಗಳೊಂದಿಗೆ ಪರಾಮರ್ಶನಾ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಅವರು, ನೇಮಕ ಮಾಡಿಕೊಳ್ಳುತ್ತಿರುವ ಹುದ್ದೆಗಳಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಸೇಲ್ಸ್ ಮ್ಯಾನೇಜರ್ ಮುಂತಾದ ಹುದ್ದೆಗಳಿವೆ. ನೇಮಕಾತಿಯ ಭಾಗವಾಗಿ ಕೆಇಎ ಈಗಾಗಲೇ ಪರೀಕ್ಷೆ ನಡೆಸಿ, ಮೆರಿಟ್ ಪಟ್ಟಿ ಕೊಟ್ಟಿದೆ. ಇದಕ್ಕೆ ಅನುಸಾರವಾಗಿ ನೇಮಕ ಪ್ರಕ್ರಿಯೆ ತ್ವರಿತವಾಗಿ ಮುಗಿಸಬೇಕು ಎಂದು ಹೇಳಿದ್ದಾರೆ.

ಎಲ್ಲ ಹುದ್ದೆಗಳನ್ನೂ ಮೆರಿಟ್ ಆಧಾರದಲ್ಲೇ, ಸರಕಾರದ ನಿಯಮಗಳಿಗೆ ಅನುಸಾರವಾಗಿ ತುಂಬಬೇಕು. ಹುದ್ದೆಗೆ ಅರ್ಹರು ಬಾರದಿದ್ದರೆ ಮೆರಿಟ್ ಪಟ್ಟಿಯಲ್ಲಿ ನಂತರದ ಸ್ಥಾನದಲ್ಲಿರುವ ಅಭ್ಯರ್ಥಿಗಳಿಗೆ ಅವಕಾಶ ಕೊಡಬೇಕು. ಇದರಲ್ಲಿ ಯಾರದೋ ಒತ್ತಡಕ್ಕೆ ಅಧಿಕಾರಿಗಳು ಮಣಿಯಬಾರದೆಂದು ಸೂಚನೆ ನೀಡಿದ್ದೇನೆ ಎಂದು ಪಾಟೀಲ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News