×
Ad

ಆಂಧ್ರದ ಸಚಿವ ಕರೆದಾಕ್ಷಣ ಯಾವ ಉದ್ಯಮಿಯೂ ಇಲ್ಲಿಂದ ಅಲ್ಲಿಗೆ ಹೋಗಿಬಿಡುವುದಿಲ್ಲ : ಎಂ‌.ಬಿ.ಪಾಟೀಲ್‌

Update: 2025-07-16 15:41 IST

 ಎಂ.ಬಿ.ಪಾಟೀಲ್‌

ಬೆಂಗಳೂರು: ʼಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಕರೆದಾಕ್ಷಣ ಯಾವ ಉದ್ಯಮಿಯೂ ರಾಜ್ಯದಿಂದ ಅಲ್ಲಿಗೆ ಹೋಗಿಬಿಡುವುದಿಲ್ಲʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ.ಪಾಟೀಲ್‌ ತಿಳಿಸಿದ್ದಾರೆ.

ಉದ್ಯಮಿಗಳಿಗೆ ಆಂಧ್ರಪ್ರದೇಶದ ಸಚಿವರ ಆಹ್ವಾನ ಸಂಬಂಧ ಬುಧವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕವು ವೈಮಾಂತರಿಕ್ಷ ವಲಯದಲ್ಲಿ ದೇಶದ ಶೇ.65ರಷ್ಟು ಪಾಲು ಹೊಂದಿದೆ. ಜಾಗತಿಕ ಮಟ್ಟದಲ್ಲಿ ನಮ್ಮದು ಮೂರನೇ ಅತ್ಯುತ್ತಮ ಕಾರ್ಯ ಪರಿಸರವಾಗಿದೆ. ಉದ್ಯಮಗಳಿಗೆ ಜಮೀನು ಕೊಟ್ಟಮಾತ್ರಕ್ಕೆ ಅವರು ಅಲ್ಲಿಗೆ ಹೋಗುವುದಿಲ್ಲ. ಕಾರ್ಯ ಪರಿಸರ ಕೂಡ ಮಹತ್ತ್ವದ ಪಾತ್ರ ವಹಿಸುತ್ತದೆ ಎಂದು ಉಲ್ಲೇಖಿಸಿದರು.

ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಟ್ಟಿದ್ದೇವೆ. ಆದರೆ ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಭೂಮಿ. ಏರೋಸ್ಪೇಸ್ ಉದ್ಯಮಿಗಳಿಗೆ ಬರೀ ಭೂಮಿಯಲ್ಲ, ಅದರ ಜತೆಗೆ ನೀರು, ವಿದ್ಯುತ್ ಎಲ್ಲವನ್ನೂ ಕೊಡುತ್ತೇವೆ. ಒಬ್ಬೇ ಒಬ್ಬ ಉದ್ಯಮಿಯೂ ರಾಜ್ಯದಿಂದ ಹೊರಹೋಗಲು ನಾನು ಬಿಡುವುದಿಲ್ಲ ಎಂದರು.

ನಾರಾ ಲೋಕೇಶ್ ಅವರ ಟ್ವೀಟ್ ಅನ್ನು ನಾನೂ ನೋಡಿದ್ದೇನೆ. ನಾನೂ ಅಲ್ಲೇ ಉತ್ತರ ಕೊಟ್ಟಿದ್ದೇನೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News