×
Ad

ಎಂಡಿಎಂಎ ಮಾರಾಟ ಯತ್ನ: ಆರೋಪಿಯ ಬಂಧನ

Update: 2023-10-13 21:57 IST
ಬಂಧಿತ ಆರೋಪಿ

ಮಡಿಕೇರಿ ಅ.13 : ನಿಷೇಧಿತ ಮಾದಕ ವಸ್ತು ‘ಎಂಡಿಎಂಎ’ ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಡಿಕೇರಿಯ ಸೆನ್ ಪೊಲೀಸರು ಬಂಧಿಸಿದ್ದಾರೆ.

ಪಿರಿಯಾಪಟ್ಟಣ ನಿವಾಸಿ ಮಹಮ್ಮದ್ ಆಲಿಶಾ(29) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಆತನ ಬಳಿಯಿದ್ದ ಎಂಡಿಎಂಎ ಯನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಮಡಿಕೇರಿಯ ಸಂಪಿಗೆಕಟ್ಟೆ ಬಳಿ ವ್ಯಕ್ತಿಯೋರ್ವ ನಿಷೇಧಿತ ಮಾದಕ ವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಸೆನ್ ಪೊಲೀಸ್ ಠಾಣೆಗೆ ಖಚಿತ ಮಾಹಿತಿ ಲಭಿಸಿತ್ತು.

ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಮಾಲು ಸಹಿತ ವಶಕ್ಕೆ ಪಡೆದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರ ಮಾರ್ಗದರ್ಶನದಲ್ಲಿ ಸೆನ್ ಪೊಲೀಸ್ ಠಾಣಾ ವೃತ್ತನಿರೀಕ್ಷಕ ಸಿ.ಕೆ.ರಾಘವೇಂದ್ರ ನೇತೃತ್ವದಲ್ಲಿ ಸೆನ್ ಠಾಣೆಯ ಕ್ರೈಂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News