ಎಂಡಿಎಸ್ ಪ್ರವೇಶ: ಆ.17 ಅರ್ಜಿ ಸಲ್ಲಿಸಲು ಕೊನೆ ದಿನ
Update: 2026-08-14 19:13 IST
ಬೆಂಗಳೂರು : ಸ್ನಾತಕೋತ್ತರ ದಂತ ವೈದ್ಯಕೀಯ ಪದವಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್‍ಸೈಟ್‍ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗಿದೆ.
ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆ ನೀಡಿದ್ದು, ಎಂಡಿಎಸ್ ನೀಟ್ ಪರೀಕ್ಷೆಯಲ್ಲಿ ನಿಗದಿಪಡಿಸಿರುವ ಕನಿಷ್ಠ ಅಂಕ ಹಾಗೂ ಅದಕ್ಕಿಂತ ಹೆಚ್ಚು ಅಂಕ ಪಡೆದಿರುವವರು ನೋಂದಣಿ ಮಾಡಿಕೊಂಡು ಆ.17ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಶುಲ್ಕ ಪಾವತಿಸಲು ಆ.18 ಕೊನೆ ದಿನ. ಹೆಚ್ವಿನ ವಿವರಗಳಿಗೆ ಕೆಇಎ ವೆಬ್‍ಸೈಟ್‍ಗೆ ಭೇಟಿ ನೀಡಿ ಎಂದು ಅವರು ಸಲಹೆ ನೀಡಿದ್ದಾರೆ.