×
Ad

ನಾಳೆ (ಅ.2) ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

Update: 2023-10-01 17:50 IST

PC: PTI File Photo

ಬೆಂಗಳೂರು, ಅ.1: ರಾಷ್ಟ್ರಪಿತ ಮಹಾತ್ಮ ಗಾಂಧಿಜಯಂತಿ ಪ್ರಯುಕ್ತ ನಾಳೆ (ಅ.2) ನಗರದಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬೃಹತ್ ಬೆಂಗಳೂರು ನಗರ ಪಾಲಿಕೆ ಆದೇಶ ಹೊರಡಿಸಿದೆ.

ಬಿಬಿಎಂಪಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಅ.2ರಂದು ಸೋಮವಾರ ಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಿದೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರಿಗೆ ಮಾಂಸ ಮಾರಾಟ ಮಾಡದಂತೆ ಇಲಾಖೆ ಸೂಚನೆ ನೀಡಿದ್ದು, ತಪ್ಪಿದಲ್ಲಿ ಪಾಲಿಕೆ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News