×
Ad

ವೈದ್ಯಕೀಯ ಶಿಕ್ಷಣದ ಸೀಟು ಕೊಡಿಸುವುದಾಗಿ ವಂಚನೆ ಪ್ರಕರಣ: ಹೈದರಾಬಾದ್ ಮೂಲದ ಆರೋಪಿ ಸೆರೆ

Update: 2023-10-31 22:39 IST

ಬೆಂಗಳೂರು, ಅ.31: ವೈದ್ಯಕೀಯ ಶಿಕ್ಷಣದ ಸೀಟು ಕೊಡಿಸುವುದಾಗಿ ವಂಚಿಸಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಇಲ್ಲಿನ ಸಂಜಯನಗರ ಠಾಣಾ ಪೊಲೀಸರು ಬಂಧಿಸಿರುವುದು ವರದಿಯಾಗಿದೆ. ಹೈದರಾಬಾದ್ ಮೂಲದ ಶರತ್ ಗೌಡ ಬಂಧಿತ ಆರೋಪಿ.

ಆರೋಪಿಯು ಸಂಜಯ ನಗರ ವ್ಯಾಪ್ತಿಯ ನ್ಯೂ ಬಿಇಎಲ್ ರಸ್ತೆಯಲ್ಲಿ ಕಚೇರಿ ತೆರೆದು ಸಿಇಟಿಯಲ್ಲಿ ರ್ಯಾಂಕಿಂಗ್ ಕಡಿಮೆ ಬಂದ ವಿದ್ಯಾರ್ಥಿಗಳ ಪೋಷಕರು, ವೈದ್ಯಕೀಯ ಶಿಕ್ಷಣ ಪಡೆಯಲು ಪ್ರಯತ್ನಿಸುತ್ತಿರುವವರ ಮಾಹಿತಿಯನ್ನು ಬೇರೆ ಬೇರೆ ಮೂಲಗಳಿಂದ ಸಂಗ್ರಹಿಸುತ್ತಿದ್ದ.

ನಂತರ ಅವರುಗಳನ್ನು ಸಂಪರ್ಕಿಸಿ ಬೇರೆ ಬೇರೆ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಅಥವಾ ಡ್ರಾಪ್ ಔಟ್ ಆಗಿರುವ ಸೀಟುಗಳನ್ನು ಕಡಿಮೆ ಖರ್ಚಿನಲ್ಲಿ ತಾನು ಕೊಡಿಸುವುದಾಗಿ ನಂಬಿಸುತ್ತಿದ್ದ.

ತಿಮ್ಮೇಗೌಡ ಎಂಬುವರ ಮಗನಿಗೆ ಕೇರಳದ ವೈದ್ಯಕೀಯ ಕಾಲೇಜೊಂದರಲ್ಲಿ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಆರೋಪಿ, 12 ಲಕ್ಷ ರೂ. ಶುಲ್ಕ ಹೇಳಿ ನಂತರ ಹಂತಹಂತವಾಗಿ 10 ಲಕ್ಷ ರೂಪಾಯಿ ಪಡೆದುಕೊಂಡಿದ್ದ. ಸೀಟು ಕೊಡಿಸದಿದ್ದಾಗ ಆರೋಪಿಯ ಕಚೇರಿಗೆ ಬಂದು ಪರಿಶೀಲಿಸಿದಾಗ ಬೀಗ ಹಾಕಿರುವುದು, ಮತ್ತು 8-10 ಜನ ವಂಚನೆಗೊಳಗಾಗಿರುವುದು ತಿಳಿದು ಬಂದಿತ್ತು.

ಸಂಜಯನಗರ ಪೊಲೀಸ್ ಠಾಣೆಯಲ್ಲಿ ತಿಮ್ಮೇಗೌಡ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೆÇಲೀಸರು ಕಾರ್ಯಾಚರಣೆ ಕೈಗೊಂಡು ಹೈದ್ರಾಬಾದ್‍ನಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 47.80 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News