×
Ad

ವಿರೋಧ ಪಕ್ಷಗಳ ನಾಯಕರ ಸಭೆ; ಬೆಂಗಳೂರಿಗೆ ಆಗಮಿಸಿದ ಶರದ್ ಪವಾರ್

Update: 2023-07-18 10:56 IST

ಬೆಂಗಳೂರು:  ಕೇಂದ್ರದ ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಭಾಗವಹಿಸಲು ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಬೆಂಗಳೂರಿಗೆ ಆಗಮಿಸಿದ್ದಾರೆ. 

ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶರದ್ ಪವಾರ್ ಅವರನ್ನು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಎಂ. ಬಿ. ಪಾಟೀಲ್ ಹೂ ಗುಚ್ಛ ನೀಡಿ ಸ್ವಾಗತಿಸಿದರು. 

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಆರ್. ವಿ. ದೇಶಪಾಂಡೆ, ಪಿಜಿಆರ್ ಸಿಂಧ್ಯಾ, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

ಸೋಮವಾರ ನಡೆದ ಔತಣಕೂಟದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿಗಳಾದ ಎಂ.ಕೆ. ಸ್ಟಾಲಿನ್, ನಿತೀಶ್ ಕುಮಾರ್, ಅರವಿಂದ ಕೇಜ್ರಿವಾಲ್ ಮತ್ತು ಹೇಮಂತ್ ಸೊರೆನ್ ಮತ್ತು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಭಾಗವಹಿಸಿದ್ದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News