ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ವಿವಿಧೆಡೆ ಆ.20ರ ವರೆಗೆ ಮಳೆ : ಹವಾಮಾನ ಇಲಾಖೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಆ.17: ಕರಾವಳಿ, ಮಲೆನಾಡು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಆ.20ರವರೆಗೆ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ, ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಉತ್ತಮ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರವಿವಾರದಂದು ಪ್ರಕಟನೆ ಹೊರಡಿಸಿದ್ದು, ಮಲೆನಾಡು ಜಿಲ್ಲಿಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆಗಳಿವೆ. ಆ.20ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ತಿರುಗುವಿಕೆಯು ವಿಸ್ತರಣೆಯಾಗುತ್ತಿದ್ದು, ಆಗಸ್ಟ್ 18ರಿಂದ ಪೂರ್ವದಿಂದ ಬಂದ ಗಾಳಿಯು ಮತ್ತೆ ಪೂರ್ವಕ್ಕೆ ತಿರುಗುವಿಕೆಯು ಮುಂಬೈ ತೀರದಲ್ಲಿರುವುದರಿಂದ ಆ.18 ರಿಂದ ಆ.20ರ ತನಕ ಮುಂಬೈ ಸುತ್ತಮುತ್ತ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ ಎಂದು ಹೇಳಿದೆ.