×
Ad

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರಕಾರ ಬದ್ಧ : ಸಚಿವ ಬೋಸರಾಜು

Update: 2024-07-18 21:12 IST

ಬೆಂಗಳೂರು : ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಏಕಕಾಲದಲ್ಲಿ ಭರ್ತಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲು ನಮ್ಮ ಸರಕಾರ ಬದ್ಧವಾಗಿದೆ ಎಂದು ವಿಧಾನಪರಿಷತ್ ಸಭಾನಾಯಕ ಎಸ್.ಬೋಸರಾಜು ಸ್ಪಷ್ಟಪಡಿಸಿದ್ದಾರೆ.

ಗುರುವಾರ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರ ಹಂತಹಂತವಾಗಿ ಆರ್ಥಿಕ ಇಲಾಖೆ ಒಪ್ಪಿಗೆ ಪಡೆದು ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‍ಸಿ) ಮೂಲಕ ಕಾಲಕಾಲಕ್ಕೆ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಹುದ್ದೆ ತುಂಬುವಾಗ ಪಾರದರ್ಶಕತೆಯನ್ನು ಅಳವಡಿಸಿಕೊಳ್ಳಲಾಗುತ್ತದೆ. ಎಲ್ಲಿಯೂ ಭ್ರಷ್ಟಾಚಾರಕ್ಕೆ ಅವಕಾಶ ನೀಡಿಲ್ಲ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News