ಬಸವ ಮಂಟಪ ಕೃತಿ ಮುಟ್ಟುಗೋಲಿಗೆ ಸಂಪುಟ ಸಮ್ಮತಿ : ಸಚಿವ ಈಶ್ವರ್ ಖಂಡ್ರೆ
ಬಸವಣ್ಣ, ಲಿಂಗಾಯತರ ಅವಹೇಳನ ಮಾಡಿದ ರವಿ ಹಂಜ್ ವಿರುದ್ಧ ಕಾನೂನು ಕ್ರಮ: ಖಂಡ್ರೆ
ಬೆಂಗಳೂರು : ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರನ್ನು ಹಾಗೂ ಲಿಂಗಾಯತರನ್ನು ಅವಹೇಳನ ಮಾಡಿರುವ ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮಕ್ಕೆ ಹಾಗೂ ಬಸವ ಮಂಟಪ ಕೃತಿ ಮುಟ್ಟುಗೋಲಿಗೆ ಸಚಿವ ಸಂಪುಟ ಸಮ್ಮತಿ ಸೂಚಿಸಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ ಆದ ಸಚಿವ ಈಶ್ವರ ಬಿ ಖಂಡ್ರೆ ಧನ್ಯವಾದ ಅರ್ಪಿಸಿದ್ದಾರೆ.
ರವಿ ಹಂಜಿ ಬಸವಣ್ಣನವರ ಬಗ್ಗೆ ಆಡಿರುವ ಅವಹೇಳನಕಾರಿ ಮಾತುಗಳ ವಿಡಿಯೋಗಳನ್ನು ಸಾಮಾಜಿಕ ತಾಣಗಳಿಂದ ಈ ಕುರಿತ ಎಲ್ಲ ವಿಡಿಯೋ ತೆಗೆದು ಹಾಕುವಂತೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಂಪುಟ ಒಪ್ಪಿಗೆ ಸೂಚಿಸಿದೆ ಎಂದೂ ತಿಳಿಸಿದ್ದಾರೆ.
12ನೇ ಶತಮಾನದಲ್ಲೇ ಶ್ರೇಣಿರಹಿತ, ವರ್ಗರಹಿತ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಬಸವಣ್ಣನಂತಹ ಮಹಾಪುರಷರ ಬಗ್ಗೆ ಈ ರೀತಿ ಅವಹೇಳನಕಾರಿಯಾಗಿ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಸಂಪುಟದ ಸಹೋದ್ಯೋಗಿಗಳಾದ ಎಂ.ಬಿ. ಪಾಟೀಲ್, ಡಾ.ಶರಣ ಪ್ರಕಾಶ್ ಪಾಟೀಲ್, ಎಸ್.ಎಸ್. ಮಲ್ಲಿಕಾರ್ಜುನ್, ಬಸವರಾಜ ರಾಯರೆಡ್ಡಿ, ವಿ.ಮುನಿಯಪ್ಪ ಸೇರಿದಂತೆ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಯವರು ಈ ನಿರ್ಣಯಕ್ಕೆ ಅನುಮೋದನೆ ನೀಡಿದ್ದಾರೆ ಎಂದೂ ತಿಳಿಸಿದ್ದಾರೆ.