ಕಾಂಗ್ರೆಸ್ ಚುನಾವಣಾ ಸಮಿತಿಯಲ್ಲಿ ಸಚಿವ ಕೆ.ಜೆ.ಜಾರ್ಜ್‍ಗೆ ಸ್ಥಾನ
Update: 2023-09-04 22:31 IST
ಬೆಂಗಳೂರು, ಸೆ.4: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಚಿಸಿರುವ ಕಾಂಗ್ರೆಸ್ ಚುನಾವಣಾ ಸಮಿತಿ(ಸಿಇಸಿ)ಯಲ್ಲಿ ರಾಜ್ಯದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಸ್ಥಾನ ನೀಡಲಾಗಿದೆ.
ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರದ ಮಾಜಿ ಸಚಿವೆ ಅಂಬಿಕಾ ಸೋನಿ, ಲೋಕಸಭೆಯಲ್ಲಿನ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ, ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್, ಮಧುಸೂದನ್ ಮಿಸ್ತ್ರಿ, ಎನ್.ಉತ್ತಮ್ ಕುಮಾರ್ ರೆಡ್ಡಿ, ಟಿ.ಎಸ್.ಸಿಂಗ್ ಡಿಯೊ, ಕೆ.ಜೆ.ಜಾರ್ಜ್,ಪ್ರೀತಮ್ ಸಿಂಗ್, ಮುಹಮ್ಮದ್ ಜಾವೇದ್, ಅಮೀ ಯಜ್ನಿಕ್, ಪಿ.ಎಲ್.ಪುನಿಯಾ, ಓಂಕಾರ್ ಮಾರ್ಕಮ್ ಹಾಗೂ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಸ್ಥಾನ ನೀಡಲಾಗಿದೆ.