×
Ad

ʼಖಾತೆʼ ವಿಚಾರ | ಸಿಎಂ ತೀರ್ಮಾನ ಮಾಡಲಿದ್ದಾರೆ : ಸಚಿವ ಕೃಷ್ಣ ಬೈರೇಗೌಡ

Update: 2026-06-13 13:17 IST

ಡಿ.ಕೆ.ಶಿವಕುಮಾರ್‌/ಕೃಷ್ಣ ಬೈರೇಗೌಡ

ಬೆಂಗಳೂರು : ʼಬೆಂಗಳೂರಿನ ಜನರ ಬಗ್ಗೆ ಅಪಾರ ನಿರೀಕ್ಷೆ ಇದೆ. ಜವಾಬ್ದಾರಿ ಬಗ್ಗೆ ಸ್ಪಷ್ಟತೆ ಇರಬೇಕುʼ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಕಾಂಗ್ರೆಸ್ ಸರಕಾರದಲ್ಲಿ ಖಾತೆ ಹಂಚಿಕೆ ಸಂಬಂಧ ಹಿರಿಯ ನಾಯಕರಲ್ಲಿದ್ದ ಅಸಮಾಧಾನ ಶಮನ ಬೆನ್ನಲ್ಲೇ, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಕೂಡ ತಮ್ಮ ಖಾತೆ ಕುರಿತು ಅಸಮಾಧಾನಗೊಂಡಿದ್ದರು. ಅಲ್ಲದೆ, ಈ ʼಖಾತೆ ಕುರಿತ ಗೊಂದಲʼ ಪರಿಹರಿಸುವಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ದಿಲ್ಲಿಗೆ ತೆರಳಿದ್ದ ಅವರು ಮಾಧ್ಯಮದವರ ಜೊತೆ ಶನಿವಾರ ಮಾತನಾಡಿದರು.

‘ಜವಾಬ್ದಾರಿ ವಹಿಸುವಾಗ ಸ್ಪಷ್ಟತೆ ಇದ್ದರೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಇಲ್ಲವಾದರೆ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಕೊಡಲು ಆಗುವುದಿಲ್ಲ. ಅಸಮಾಧಾನ ಇಲ್ಲ, ಕಠಿಣವಾದ ಜವಾಬ್ದಾರಿ ವಹಿಸಿದ್ದಾರೆ ಎಂದರು.

‘ನಾನು ಏನೇ ಹೇಳಿರೂ ಉತ್ತಮದಾಯಕವಾಗಿರುತ್ತದೆ. ಸ್ಪಷ್ಟತೆ ಇದ್ದರೆ ನಿರೀಕ್ಷೆಯಷ್ಟು ಕೆಲಸ ಮಾಡಬಹುದು. ಫಲಿತಾಂಶ ಉತ್ತಮವಾಗಿರುತ್ತದೆ ಎಂದು ಹೇಳಿದ್ದೇನೆ. ಮುಖ್ಯಮಂತ್ರಿ ಈ ಬಗ್ಗೆ ತೀರ್ಮಾನ ಮಾಡುತ್ತಾರೆ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಕೃಷ್ಣ ಬೈರೇಗೌಡ ಅವರು ಕೇವಲ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಮತ್ತು ಬಿಎಂಆರ್‌ಡಿಎ (ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ) ಗಳನ್ನು ತನ್ನ ಖಾತೆಗೆ ಸೇರಿಸಬೇಕೆಂದು ಪಟ್ಟು ಹಿಡಿದಿದ್ದರು ಎನ್ನಲಾಗಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅವರು ಅಧಿಕಾರ ಸ್ವೀಕರಿಸಿದ ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಆದರೆ ಹಿರಿಯ ನಾಯಕರಾದ ರಾಮಲಿಂಗಾರೆಡ್ಡಿ ಮತ್ತು ಕೆ.ಎಚ್‌.ಮುನಿಯಪ್ಪ ಅವರು ತಮಗೆ ನೀಡಿರುವ ಖಾತೆ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ರಾಹುಲ್‌ ಗಾಂಧಿ ಸಹಿತ ಹೈಕಮಾಂಡ್‌ ನಾಯಕರು ಹಿರಿಯ ನಾಯಕರ ಮನವೊಲಿಸಿ ಉಂಟಾಗಿದ್ದ ಅಸಮಾಧಾನವನ್ನು ಶಮನಗೊಳಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News