ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ : 3 ತಿಂಗಳ ಬಳಿಕ ಚಾಲಕನ ಬಂಧನ
Update: 2025-04-20 13:46 IST
ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಜ.14 ರಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಕಾರಣವಾಗಿದ್ದ ಟ್ರಕ್ ಚಾಲಕನನ್ನು 3 ತಿಂಗಳ ಬಳಿಕ ಬಂಧಿಸಿರುವ ಪೊಲೀಸರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ನಡೆದ ಬಳಿಕವಷ್ಟೇ ಸತ್ಯಾಸತ್ಯತೆ ತಿಳಿಯಲಿದೆ ಎಂದರು.
ನಾನು ಕೂಡ ನಿದ್ದೆಗಣ್ಣಿನಲ್ಲಿದ್ದೆ, ನನಗೆ ಯಾವ ರೀತಿಯ ಅನುಮಾನವಿಲ್ಲ. ಚಾಲಕನನ್ನು ಹಿಡಿಯಲು ಪೊಲೀಸರು ಸಾಕಷ್ಟು ಶ್ರಮ ಹಾಕಿದ್ದಾರೆ. ಚಾಲಕ ಮಹಾರಾಷ್ಟ್ರದ ಪುಣೆ ಮೂಲದವರು ಎಂದು ತಿಳಿದು ಬಂದಿದೆ. ಬೆಳಗಾವಿ ಪೊಲೀಸರು ಬಹಳ ಚುರುಕಾಗಿ ತನಿಖೆ ನಡೆಸಿ ಚಾಲಕನನ್ನು ಹಿಡಿದಿದ್ದಾರೆ. ಅವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು ಎಂದು ಸಚಿವರು ಹೇಳಿದರು.