×
Ad

ಕೋವಿಡ್ ಸೋಂಕು ಹೆಚ್ಚಳ | ಶೀತ, ನೆಗಡಿ, ಜ್ವರ ಇರುವ ಮಕ್ಕಳಿಗೆ ರಜೆ : ಸಚಿವ ಮಧು ಬಂಗಾರಪ್ಪ

Update: 2025-05-27 22:16 IST

ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿದ್ದು, ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು. ಅಂತವರಿಗೆ ರಜೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ. ಆದರೆ, ಎಚ್ಚರಿಕೆ, ಮುಂಜಾಗೃತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ನೀಡಿದರೆ ಅದನ್ನು ಶಾಲೆಗಳಲ್ಲಿ ಅನುಷ್ಠಾನಕ್ಕೆ ತರುತ್ತೇವೆ ಎಂದರು.

ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರಕಾರ ನೀಡುವ ಮಾರ್ಗಸೂಚಿಯನ್ನು ನಾವು ಜಾರಿ ಮಾಡುತ್ತೇವೆ. ಈವರೆಗೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ. ಸೋಮವಾರ ಮುಖ್ಯಮಂತ್ರಿಗಳು ಅಧಿಕಾರಿಗಳ ಜತೆ ಸಭೆ ಮಾಡಿದ್ದಾರೆ. ಅದರಲ್ಲಿ ಕೆಲವು ಮಾರ್ಗಸೂಚಿಗಳನ್ನು ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನ ಪಾಲನೆ ಮಾಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News