×
Ad

ರಾಜ್ಯದಲ್ಲಿ 200 ಕೋಟಿ ರೂ. ಹೂಡಿಕೆಗೆ ಬೆಸ್ಟೆಕ್ ಸಮೂಹದಿಂದ ಆಸಕ್ತಿ : ಸಚಿವ ಎಂ.ಬಿ.ಪಾಟೀಲ್

Update: 2024-08-20 20:33 IST

PC : x/@MBPatil

ಬೆಂಗಳೂರು : ರಾಜ್ಯದಲ್ಲಿ 200 ಕೋಟಿ ರೂ.ಬಂಡವಾಳ ಹೂಡಿಕೆಗೆ ತೈವಾನ್‍ನ ಬೆಸ್ಟೆಕ್ ಪವರ್ ಎಲೆಕ್ಟ್ರಾನಿಕ್ಸ್ ಕಂಪೆನಿ ಆಸಕ್ತಿ ತಾಳಿದ್ದು, ಬೆಂಗಳೂರಿನ ಸುತ್ತಮುತ್ತ ಕಾರ್ಖಾನೆ ಸ್ಥಾಪಿಸಲು ಆಸಕ್ತಿ ತೋರಿದೆ. ಅದಕ್ಕೆ ರಾಜ್ಯ ಸರಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಮಂಗಳವಾರ ಇಲ್ಲಿ ಬೆಸ್ಟೆಕ್ ಉದ್ಯಮ ಸಮೂಹದ ಅಧ್ಯಕ್ಷ ಮೈಕ್ ಚೆನ್ ಮತ್ತು ಉಪಾಧ್ಯಕ್ಷ ತೆರೇಸಾ ಡಾಂಗ್ ತಮ್ಮನ್ನು ಭೇಟಿಯಾದ ಬಗ್ಗೆ ಮಾಹಿತಿ ನೀಡಿರುವ ಅವರು, ತೈವಾನ್ ಮೂಲದ ಕಂಪೆನಿಯ ಈ ಯೋಜನೆಯಿಂದ 5ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. ಮೂಲಸೌಕರ್ಯ ಅಭಿವೃದ್ಧಿ ಬಳಿಕ ಮೂರು ವರ್ಷಗಳಲ್ಲಿ ಕಂಪೆನಿಯು ಯೋಜನೆಗೆ ಹಂತಹಂತವಾಗಿ ಬಂಡವಾಳ ಹೂಡಲಿದೆ ಎಂದು ವಿವರಿಸಿದ್ದಾರೆ.

ಬೆಸ್ಟೆಕ್ ಕಂಪೆನಿಯು ಅಡಾಪ್ಟರ್, ಸಿ-ಪಿನ್, ಇ.ವಿ. ಮತ್ತು ಲ್ಯಾಪ್‍ಟಾಪ್ ಚಾರ್ಜರ್, ಕೇಬಲ್ ಇತ್ಯಾದಿಗಳನ್ನು ಉತ್ಕೃಷ್ಟ ಗುಣಮಟ್ಟದೊಂದಿಗೆ ತಯಾರಿಸಲಿದೆ. ಈ ಮೂಲಕ ಕಂಪೆನಿಯು ವಾರ್ಷಿಕವಾಗಿ 2,500 ಕೋಟಿ ರೂ.ವಹಿವಾಟು ನಡೆಸಲಿದೆ ಎಂದು ಅವರು ವಿವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News