×
Ad

ಕಾಂಗ್ರೆಸ್​ ಸೇರುವಂತೆ ಬಸವರಾಜ ಬೊಮ್ಮಾಯಿಗೆ ಆಹ್ವಾನ ನೀಡಿದ ಸಚಿವ ಎಂ.ಬಿ ಪಾಟೀಲ್

Update: 2023-07-17 13:45 IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್​ ಕಾಂಗ್ರೆಸ್​ ಪಕ್ಷಕ್ಕೆ ಆಹ್ವಾನಿಸಿದ್ದಾರೆ. 

ವಿಪಕ್ಷ ನಾಯಕನ ಆಯ್ಕೆ ವಿಳಂಬ ವಿಚಾರವಾಗಿ ಸೋಮವಾರ ಟ್ವೀಟ್ ಮಾಡಿರುವ ಸಚಿವರು​, ''ಶೀಘ್ರದಲ್ಲೇ ವಿಪಕ್ಷ ನಾಯಕರಾಗಲಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆಗಳು. ಅಂತಿಮವಾಗಿ ಬಸವರಾಜ ಬೊಮ್ಮಾಯಿ ಅವರನ್ನು ಮೂಲೆಗುಂಪು ಮಾಡಲು ನಿರ್ಧರಿಸಿದಂತಿದೆ. ಬೊಮ್ಮಾಯಿಯವರಿಗೂ ಸಹ ಶ್ರೀ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಅವರಿಗೆ ಬಂದಂತಹ ಪರಿಸ್ಥಿತಿಯೇ ಬರಲಿದೆ'' ಎಂದು ಹೇಳಿದ್ದಾರೆ. 

''ಬಿಜೆಪಿ ಎಂಬುದು ಕುಸಿಯುತ್ತಿರುವ ಕಾರ್ಡ್ ಗಳ ಮನೆಯಾಗಿದೆ. ಬೊಮ್ಮಾಯಿಯವರು ಕಾಂಗ್ರೆಸ್ ಸೇರುವ ಬಗ್ಗೆ ಯೋಚಿಸಬೇಕು. ಅವರು ಈ ಹಿಂದಿನಂತೆ ಹಾಗೂ ಹಿರಿಯ ಬೊಮ್ಮಾಯಿಯವರಂತೆ ಜಾತ್ಯಾತೀತ ಸಿದ್ಧಾಂತಕ್ಕೆ ಮರಳಿದರೆ ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸಬಹುದು'' ಎಂದು ಟ್ವೀಟ್ ಮಾಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News