×
Ad

ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ಸಚಿವ ಎಂ.ಬಿ.ಪಾಟೀಲ್

Update: 2025-01-22 14:23 IST

ನವದೆಹಲಿ: ಕರ್ನಾಟಕದ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು ನವದೆಹಲಿಯಲ್ಲಿ ಬುಧವಾರ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಹ್ವಾನಿಸಿದರು.

ನವದೆಹಲಿಯ ಉಕ್ಕು ಸಚಿವಾಲಯದಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಪಾಟೀಲ್ ಅವರು; ತಾವು ತಪ್ಪದೇ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಹಾಗೂ ಈ ನಿಟ್ಟಿನಲ್ಲಿ ತಮ್ಮ ಸಹಕಾರ ಅಗತ್ಯ ಬೇಕಿದೆ ಎಂದು ಕೋರಿದರು.

ಕರ್ನಾಟಕದ ಕೈಗಾರಿಕಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಇಲಾಖೆಯ ನಿರ್ದೇಶಕಿ ಗುಂಜನ್ ಕೃಷ್ಣ ಮತ್ತಿತರರು ಪಾಟೀಲ್ ಅವರ ನಿಯೋಗದಲ್ಲಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News