×
Ad

ಅಕ್ರಮ ಮದ್ಯ ಮಾರಾಟಗಾರರ ಮೇಲೆ ನಿರ್ದಾಕ್ಷಿಣ್ಯ ಕ್ರಮ : ಸಚಿವ ಆರ್.ಬಿ.ತಿಮ್ಮಾಪುರ

Update: 2024-07-18 19:32 IST

ಬೆಂಗಳೂರು : ರಾಜ್ಯದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರ ಕುರಿತು ದಾಖಲೆ ಸಾಮೇತ ದೂರು ನೀಡಿದರೆ, ಅಕ್ರಮ ಮದ್ಯ ಮಾರಾಟಗಾರರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ.

ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್‍ರ ಪ್ರಶ್ನೆಗೆ ಉತ್ತರಿಸಿದ ಅವರು, ಅಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತದೆ, ಇಲ್ಲಿ ನಡೆಯುತ್ತದೆ ಎಂದು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ನಮಗೆ ನಿರ್ಧಿಷ್ಟವಾಗಿ ದಾಖಲೆ ಸಮೇತ ದೂರು ನೀಡಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News