×
Ad

18 ತಿಂಗಳಿಂದಲೂ ಕಾಂಗ್ರೆಸ್ ಸರಕಾರ ಬೀಳಿಸಲು ಬಿಜೆಪಿ ಪ್ರಯತ್ನ‌ : ಸಚಿವ ಸಂತೋಷ್ ಲಾಡ್

Update: 2024-11-14 20:50 IST

Screengrab : x/@SantoshSLadINC

ಬೆಂಗಳೂರು : ʼರಾಜ್ಯದ ಕಾಂಗ್ರೆಸ್ ಸರಕಾರವನ್ನು ಪತನಗೊಳಿಸಲು ಬಿಜೆಪಿಯವರು ಸುಮಾರು 18 ತಿಂಗಳಿನಿಂದಲೂ ಪ್ರಯತ್ನಿಸುತ್ತಿದ್ದು, ನಮ್ಮ ಶಾಸಕರಿಗೆ ಬಿಜೆಪಿ ನಾಯಕರು ತಲಾ 50 ಕೋಟಿ ರೂ. ಆಮಿಷ ಒಡ್ಡಿದ್ದರುʼ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅವರು, ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ನಾಯಕರು ತಲಾ 50 ಕೋಟಿ ರೂ. ಆಮಿಷ ಒಡ್ಡಿದ್ದರು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪದಲ್ಲಿ ಸತ್ಯವಿದೆ ಎಂದರು.

ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದೆಲ್ಲವೂ ಸಾಧ್ಯ. ಸರಕಾರ ಅಸ್ಥಿರಗೊಳಿಸುವುದೇ ಅವರ ಕೆಲಸ. ಸತತವಾಗಿ ಆ ಪ್ರಯತ್ನದಲ್ಲೇ ಇದ್ದಾರೆ ಎಂದು ಸಂತೋಷ್ ಲಾಡ್ ವಾಗ್ದಾಳಿ ನಡೆಸಿದರು.‌

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News