×
Ad

ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೂರು ಕೋಟಿ ರೂ.ಮೀಸಲು : ಸಚಿವ ಶಿವರಾಜ್ ತಂಗಡಗಿ

Update: 2024-07-24 17:58 IST

ಬೆಂಗಳೂರು : ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂ.ಬಿಡುಗಡೆಗೆ ಪ್ರಸ್ತಾವ ಸಲ್ಲಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ರವಿಕುಮಾರ್ ಗಣಿಗ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಡಿಸೆಂಬರ್ 20, 21ರಂದು ಆಯೋಜಿಸಲಾಗಿರುವ ಸಮ್ಮೇಳನಕ್ಕೆ ಅನುದಾನ ಬಿಡುಗಡೆಗೆ ಪರಿಶೀಲಿಸಲಾಗುತ್ತಿದೆ. ಈಗಾಗಲೇ 2024-25ನೆ ಸಾಲಿನ ಕ್ರಿಯಾ ಯೋಜನೆಯಲ್ಲಿ ಸಮ್ಮೇಳನಕ್ಕೆ ಅನುದಾನ ಮೀಸಲಿರಿಸಲಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News