×
Ad

ಕುತೂಹಲ ಮೂಡಿಸಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ - ಬಿಜೆಪಿ ನಾಯಕ ಎಂ.ಪಿ.ರೇಣುಕಾಚಾರ್ಯ ಭೇಟಿ

Update: 2023-08-26 18:03 IST

ದಾವಣಗೆರೆ: ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಎಂ.ಪಿ.ರೇಣುಕಾಚಾರ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಈ ಬಾರಿ ಲೋಕಾಸಭಾ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ರೇಣುಕಾಚಾರ್ಯ ಅವರು, ಜಿಲ್ಲೆಯಿಂದ ಬಿಜೆಪಿಯಿಂದ ಟಿಕೆಟ್ ಕೇಳಿದ್ದರು. ಅದರೆ, ಹಾಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರಿಗೆ ಟೀಕೆಟ್ ಘೋಷಣೆಯಾಗುವುದು ಖಚಿತವಾಗುತ್ತಿದ್ದಂತೆ ಕಾಂಗ್ರೆಸ್ ನಿಂದ ಲೋಕಸಭೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಅದರಂತೆ ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ನಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕಾಂಗ್ರೆಸ್ ಗೆ ಸೇರ್ಪಡೆ ಆಗುತ್ತಾರೆ ಎನ್ನುವ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ. ಅಲ್ಲದೇ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿದ್ದರು. ಈಗ ದಾವಣಗೆರೆ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ರನ್ನು ಭೇಟಿ ಮಾಡಿರುವ ಫೋಟೋಗಳು ವೈರಲ್ ಆಗಿವೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News