×
Ad

‘ಪಕ್ಷ ಹೇಳಿದ ಜವಾಬ್ದಾರಿ ನಿಭಾಯಿಸುತ್ತೇನೆ, DCM ಹುದ್ದೆ ಸೇರಿ ಯಾವುದೇ ಹೊಣೆಗೂ ಸಿದ್ಧ': ಸಚಿವ ಝಮೀರ್ ಅಹಮ್ಮದ್

Update: 2026-05-28 11:03 IST

 ಸಚಿವ ಝಮೀರ್ ಅಹಮ್ಮದ್ | Photo Credit : PTI

ಬೆಂಗಳೂರು, ಮೇ 28: ‘ಉಪಮುಖ್ಯಮಂತ್ರಿ ಸ್ಥಾನವೂ ಸೇರಿದಂತೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ. ಪಕ್ಷ ಹೇಳಿದಂತೆ ನಾವು ಕೇಳುತ್ತೇವೆ’ ಎಂದು ವಸತಿ ಸಚಿವ ಝಮೀರ್ ಅಹಮ್ಮದ್ ಖಾನ್ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಗುರುವಾರ ನಡೆದ ಮಹತ್ವದ ಬ್ರೇಕ್‌ಫಾಸ್ಟ್ ಸಭೆಗೆ ಆಗಮಿಸಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಭೆ ಯಾವ ಕಾರಣಕ್ಕೆ ಕರೆದಿದ್ದಾರೆ ಎಂದು ಮಾಹಿತಿಯಿಲ್ಲ. ನನಗೆ ಭಾಗವಹಿಸುವಂತೆ ಹೇಳಿದ್ದಾರೆ ಎಂದು ಝಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News