×
Ad

ಶಾಸಕಾಂಗ ಸಭೆಗೆ ಗೈರಾದ ಸಚಿವರು; ಸಿಟ್ಟಾದ ಸಿಎಂ ಸಿದ್ದರಾಮಯ್ಯ

Update: 2023-12-14 09:33 IST

Photo: facebook

ಬೆಳಗಾವಿ: ನಗರದ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರಾದ ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವರಾದ ಪ್ರಿಯಾಂಕ್ ಖರ್ಗೆ,ಎಂ.ಬಿ.ಪಾಟೀಲ್, ಶರಣಪ್ರಕಾಶ್ ಪಾಟೀಲ್, ಜಮೀರ್ ಅಹಮದ್,ಸತೀಶ್ ಜಾರಕಿಹೊಳಿ,ಶರಣಬಸಪ್ಪ ದರ್ಶನಾಪುರ್ ಸೇರಿದಂತೆ ಕೆಲ ಸಚಿವರ ಗೈರಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಸಚಿವರಿಗೆ ಎಚ್ಚರಿಕೆ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಚಿವರು,ಶಾಸಕರ ನಡುವೆ ಸಮನ್ವಯತೆಗಾಗಿ ಇರುವ ಶಾಸಕಾಂಗ ಸಭೆಗೆ ಸಚಿವರೇ ಗೈರಾದರೆ ಹೇಗೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News