×
Ad

ಬೆಂಗಳೂರು: ಪ್ರೀತಿಸಿದ್ದಕ್ಕೆ ಕಾಲೇಜು ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಯುವತಿಯೊಬ್ಬಳನ್ನು ಪ್ರೀತಿಸಿದ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಯನ್ನು ಅಪಹರಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Update: 2023-07-16 11:35 IST

ಬೆಂಗಳೂರು, ಜು.16: ಯುವತಿಯೊಬ್ಬಳನ್ನು ಪ್ರೀತಿಸಿದ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಯನ್ನು ಅಪಹರಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.

ಆರ್.ಆರ್. ನಗರ ನಿವಾಸಿ ರಂಗನಾಥ್ ಎಂಬವರ ಪುತ್ರ ಶಶಾಂಕ್(19) ದುಷ್ಕರ್ಮಿಗಳಿಂದ ಬೆಂಕಿ ಹಚ್ಚಲ್ಪಟ್ಟವರು. ಶಶಾಂಕ್ ಮೈಸೂರಿನಲ್ಲಿರುವ ತನ್ನ ಸಂಬಂಧಿಕರ ಮಗಳು ಲಹರಿ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದು, ಇದಕ್ಕೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ನಡುವೆ ಜುಲೈ 11ರಂದು ಲಹರಿ ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದು, ಆಕೆಯನ್ನು ಶಶಾಂಕ್ ತನ್ನ ಮನೆಗೆ ಕರೆದೊಯ್ದಿದ್ದರು. ಈ ವಿಷಯ ಅರಿತ ಯುವತಿಯ ಪೋಷಕರು ಶಶಾಂಕ್ ಮನೆಗೆ ನುಗ್ಗಿ ಹಲ್ಲೆ ನಡೆಸಿ ಯುವತಿಯನ್ನು ಕರೆದೊಯ್ದಿದ್ದರೆನ್ನಲಾಗಿದೆ.

ಇದೇ ವಿಚಾರವಾಗಿ ಯುವತಿ ಕಡೆಯವರು ಜು.15ರಂದು ಕಾಲೇಜಿನಿಂದ ಮನೆಗೆ ಹಿಂದಿರುಗಲು ಬಸ್ಸಿಗೆ ಕಾಯುತ್ತಿದ್ದ ಶಶಾಂಕ್ ರನ್ನು ಅಪಹರಿಸಿ ಕುಂಬಳಗೋಡು ಕಡೆ ಕರೆದೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಸುಟ್ಟ ಗಾಯಗಳಾಗಿರುವ ಶಶಾಂಕ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿಗಳ ವಿರುದ್ದ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News