×
Ad

ಬಿಗ್​ ಬಾಸ್​ ಮನೆಯಿಂದ ಹೊರಬಂದ ಶಾಸಕ ಪ್ರದೀಪ್ ಈಶ್ವರ್...!

Update: 2023-10-10 13:50 IST

screengrab: X/@ColorsKannada

ಬೆಂಗಳೂರು: ರಿಯಾಲಿಟಿ ಶೋ ‘ಬಿಗ್ ಬಾಸ್ʼ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಇದೀಗ ಹೊರ ಬಂದಿದ್ದಾರೆ.

ಕಲರ್ಸ್ ಕನ್ನಡದ ಟ್ವಿಟರ್ ಹ್ಯಾಂಡಲ್ ನಲ್ಲಿ ಪ್ರದೀಪ್ ಈಶ್ವರ್ ಬಿಗ್‌ ಬಾಸ್‌ ಮನೆಯಲ್ಲಿರುವ ಪ್ರೋಮೋ ಪೋಸ್ಟ್ ಆಗಿತ್ತು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ನ ಪ್ರದೀಪ್ ಈಶ್ವರ್ ಅವರು ‘ಬಿಗ್ ಬಾಸ್’ ಮನೆಯಲ್ಲಿ ಕಾಣಿಸಿಕೊಂಡಿದ್ದಕ್ಕೆ ಅವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆದರೆ, ಬಿಗ್ ಬಾಸ್ ಗೆ ಸ್ಪರ್ಧಿಯಾಗಿ ಹೋಗಿಲ್ಲ ಎಂದು ಖುದ್ದು ಪ್ರದೀಪ್‌ ಈಶ್ವರ್‌ ಅವರೇ ಸ್ಪಷ್ಟನೆ ನೀಡಿದ್ದಾರೆ. 

ʼʼಅತಿಥಿಯಾಗಿ  ಹೋಗಿದ್ದೆʼʼ

ʼʼವಾಹಿನಿಗಳ ಕಾರ್ಯಕ್ರಮಗಳಲ್ಲಿ ಭಾಗಿ ಆಗುವುದು ತಪ್ಪೇನೂ ಇಲ್ಲ. ನಾನು ಬಿಗ್ ಬಾಸ್ ಮನೆಗೆ ಹೋಗಿದ್ದು ಕೇವಲ 2-3 ತಾಸು ಮಾತ್ರ. ಅದರ ಆಯೋಜಕರು ನನ್ನ ಸ್ನೇಹಿತರು, ಅವರ ಆಹ್ವಾನದ ಮೇರೆಗೆ ಅಲ್ಲಿನ ಸ್ಪರ್ಧಿಗಳಿಗೆ ಉತ್ತೇಜಿಸಲು ಹೋಗಿದ್ದೆ. ಸ್ಫೂರ್ತಿದಾಯಕ ಮಾತುಗಳನ್ನು ಆಡಿದ್ದೇನೆ. ಬಿಗ್ ಬಾಸ್ ಮನೆಯಲ್ಲಿ ಇರುವವರಿಗೆ ಧೈರ್ಯ ತುಂಬಿದ್ದೇನೆʼʼ ಎಂದು ಪ್ರದೀಪ್ ಈಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. 

ಸ್ಪರ್ಧಿಯಾಗಿ ಬಂದಿದ್ದೇನೆ ಎಂದಿದ್ದ ಶಾಸಕ!

ʻʻನಾನು ನಿನ್ನೆಯೇ ಬಿಗ್‌ ಬಾಸ್‌ ವೇದಿಕೆಗೆ ಬರಬೇಕಿತ್ತು. ಸ್ಪರ್ಧಿಯಾಗಿ ಇಲ್ಲಿ ಸೇರಿದ್ದಕ್ಕೆ ತುಂಬ ಖುಷಿಯಾಗುತ್ತಿದೆ. ಗೆಲ್ಲೋದರಲ್ಲಿ ನಮಗೆ ಕಾಂಪ್ರಮೈಸ್‌ ಇಲ್ಲʼʼ ಎಂದು ಸ್ಪರ್ಧಿಗಳ ಮುಂದೆ ಶಾಸಕ ಪ್ರದೀಪ್ ಈಶ್ವರ್ ಹೇಳಿಕೊಂಡಿದ್ದರು. 

ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಸ್ಪೀಕರ್​ಗೆ ದೂರು

ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಗೆ ಹೋಗಿದ್ದರ ಹಿನ್ನೆಲೆಯಲ್ಲಿ ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ವಿಧಾನಸಭೆ ಸ್ಪೀಕರ್​ಗೆ ದೂರು ನೀಡಿದೆ. ಪ್ರದೀಪ್‌ ಈಶ್ವರ್‌ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಸೇವಾ ಸಂಸ್ಥೆಯು ಆಗ್ರಹಿಸಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News