×
Ad

ಸೋಮವಾರದಿಂದ 'ಅನ್ನಭಾಗ್ಯ' ಫಲಾನುಭವಿಗಳ ಖಾತೆಗೆ ಹಣ: ಸಚಿವ ಮುನಿಯಪ್ಪ

Update: 2023-07-08 22:37 IST

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆ  ಜುಲೈ 10 ರಂದು (ಸೋಮವಾರ) ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಸಂಜೆ ಚಾಲನೆ ನೀಡಲಿದ್ದಾರೆ. 15 ದಿನಗಳಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.

ಸೋಮವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಡಿಬಿಟಿ ಗೆ ಚಾಲನೆ ನೀಡಲಿದ್ದಾರೆ. ಇದರಿಂದ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ ಎಂದು ಮಾಹಿತಿ ನೀಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News