×
Ad

ಆಗಸ್ಟ್ ನಲ್ಲಿ ಗೃಹಲಕ್ಷ್ಮಿಯರಿಗೆ ಹಣ ಖಚಿತ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Update: 2023-06-28 19:47 IST

ಬೆಂಗಳೂರು, ಜೂ. 28: ‘ಮನೆಯೊಡತಿಗೆ 2ಸಾವಿರ ರೂ.ಹಣ ನೀಡುವ ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಅಡಿ ಆಗಸ್ಟ್ ತಿಂಗಳಿನಲ್ಲಿ ಫಲಾನುಭವಿಗಳಿಗೆ ಹಣ ತಲುಪಲಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್ ರೂಪಿಸಿದ್ದು, ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿಯೂ ಒಪ್ಪಿಗೆ ನೀಡಲಾಗಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲ ತಯಾರಿ ಮಾಡಿದ್ದೇವೆ’ ಎಂದು ತಿಳಿಸಿದರು.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ಯಾವ ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲೆಂದೇ ಆ್ಯಪ್ ಮಾಡಲಾಗಿದೆ ಎಂದ ಅವರು, ಸಚಿವ ಸಂಪುಟದ ತೀರ್ಮಾನದಂತೆ ಜುಲೈ 14ರಿಂದ ಅರ್ಜಿ ಸಲ್ಲಿಸಲು ಅವಕಾಶ ದೊರೆಯಲಿದೆ ಎಂದು ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News