×
Ad

ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಅನೈತಿಕ ಪೊಲೀಸ್ ಗಿರಿ: ಪ್ರತ್ಯೇಕ ಎರಡು ಪ್ರಕರಣ ದಾಖಲು

Update: 2024-01-10 12:30 IST

ಚಿಕ್ಕಮಗಳೂರು, ಜ.10: ಮೂಡಿಗೆರೆ ಪಟ್ಟಣದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಯುವಕನೋರ್ವನ ಮೇಲೆ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮೂಡಿಗೆರೆ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.

ಈ ಸಂಬಂಧ ಜಿಲ್ಲಾ ಪೋಲಿಸ್ ಇಲಾಖೆ ಮಾಹಿತಿ ನೀಡಿದ್ದು, ಐಪಿಸಿ ಸೆಕ್ಷನ್ 143, 144, 148, 323, 324, 504, 506, 149ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದೆ.

ಮಂಗಳವಾರ ಸಂಜೆ ಇಲ್ಲಿನ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳಿಗೆ ಯುವಕನೋರ್ವ ಚಾಕಲೇಟ್ ನೀಡಿದ್ದನ್ನು ಆಕ್ಷೇಪಿಸಿ ಕಾರಿನಲ್ಲಿ ಬಂದ ತಂಡವೊಂದು ಯುವಕನ ಮೇಲೆ ಯದ್ವಾತದ್ವಾ ಹಲ್ಲೆ ನಡೆಸಿತ್ತು. ಇದರ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಹಲ್ಲೆಗೆ ಸಂಬಂಧಿಸಿ ಮೂಡಿಗೆರೆ ಪೊಲೀಸ್ ಠಾಣೆ ಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳನ್ನು ದಾಖಲಿಸಿ ಕೊಂಡಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News