×
Ad

ಮರಗಳ್ಳತನದಲ್ಲಿ ತೊಡಗಿದ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಮ್ ಸಿಂಹ: ಕಾಂಗ್ರೆಸ್‌ ಆರೋಪ

Update: 2023-12-24 12:55 IST

ಬೆಂಗಳೂರು: ಪ್ರತಾಪ್‌ ಸಿಂಹ ಸಂಸತ್‌ ಭವನದೊಳಗೆ ಪ್ರವೇಶಿಸಲು ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ, ಅವರ ತಮ್ಮ ವಿಕ್ರಮ್ ಸಿಂಹ ಮರಗಳ್ಳತನದಲ್ಲಿ ತೊಡಗಿದ್ದಾನೆ ಎಂದು ಕಾಂಗ್ರೆಸ್‌  ಆರೋಪಿಸಿದೆ.

ಈ ಸಂಬಂಧ ʼಎಕ್ಸ್‌ʼ ನಲ್ಲಿ ಪೋಸ್ಟ್‌ ವೊಂದನ್ನು ಹಂಚಿಕೊಂಡಿರುವ ಕಾಂಗ್ರೆಸ್‌, ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂ. ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ಮಾಡಿದ್ದಾರೆ. ಅಲ್ಲಿಯ ದಕ್ಷ ಅಧಿಕಾರಿಯಾದ ತಹಸೀಲ್ದಾರ್ ಮಮತಾ ಅವರ ಮೂಲಕ ಈ ವಿಷಯ ಬೆಳಕಿಗೆ ಬಂದಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದು ಈ ಬಗ್ಗೆ ಸಚಿವ ಈಶ್ವರ್‌ ಖಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅದೇಶಿಸಲಿದ್ದಾರೆ ಎಂದು ಕಾಂಗ್ರೆಸ್‌ ಪೋಸ್ಟ್‌ ನಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News