×
Ad

ಮೂಡಿಗೆರೆ: ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಬಾವಿಯಲ್ಲಿ ಪತ್ತೆ

Update: 2023-12-24 16:04 IST

ಮೂಡಿಗೆರೆ: ನಾಪತ್ತೆಯಾಗಿದ್ದ ಯುವತಿಯೊಬ್ಬಳ ಮೃತದೇಹ ರವಿವಾರ ಕುಡಿಯುವ ನೀರು ಯೋಜನೆಯ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ಸೃಷ್ಟಿ (19) ಎಂದು ಗುರುತಿಸಲಾಗಿದೆ. ಡಿ.21 ಗುರುವಾರ ಸಂಜೆಯಿಂದ ಕಾಣೆಯಾಗಿದ್ದ ಈಕೆಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಯುವತಿಯ ಮೃತದೇಹ ತೇಲುತ್ತಿರುವುದನ್ನು ವಾಟರ್ ಮ್ಯಾನ್ ಗಮನಿಸಿ ಮನೆಯವರಿಗೆ ಮಾಹಿತಿ ನೀಡಿದ್ದಾರೆ.

ಹಾಸನದ ಮಹಿಳಾ ಕಾಲೇಜೊಂದರ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಯಾಗಿರುವ ಸೃಷ್ಟಿ ಕಳೆದ ವಾರ ಮನೆಗೆ ಬಂದಿದ್ದಳು ಎಂದು ತಿಳಿದು ಬಂದಿದೆ. ತಂದೆ ತಾಯಿ ಮತ್ತು ಇಬ್ಬರು ಸಹೋದರರನ್ನು ಅಗಲಿರುವ ಸೃಷ್ಟಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News