×
Ad

ರಾಮನಗರ: ರೌಡಿ ಶೀಟರ್ ಹತ್ಯೆ

Update: 2023-10-15 15:06 IST
  • ಸಾಂದರ್ಭಿಕ ಚಿತ್ರ

ರಾಮನಗರ: ರೌಡಿ ಶೀಟರ್​ ಓರ್ವನನ್ನು  ಹತ್ಯೆ ಮಾಡಿರುವ ಘಟನೆ ರಾಮನಗರದ ಕೆರೆಮೇಗಳ ದೊಡ್ಡಿ ಗ್ರಾಮದಲ್ಲಿ ಶನಿವಾರ ರಾತ್ರಿ ವರದಿಯಾಗಿದೆ. 

ಲೋಕೇಶ್​​ (38) ಕೊಲೆಗೀಡಾದ ರೌಡಿ ಶೀಟರ್ ಎಂದು ಗುರುತಿಸಲಾಗಿದೆ.​​

ಶನಿವಾರ ರಾತ್ರಿ ಲೋಕೇಶ್ ನ ಮನೆ ಬಳಿಯೇ  ದುಷ್ಕರ್ಮಿಗಳು ಲಾಂಗ್​ನಿಂದ ಕೊಚ್ಚಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆನ್ನಲಾಗಿದೆ. ʼಹಳೆ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರುವ ಅನುಮಾನವಿದೆ. ಮೃತ ದೇಹವನನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿ, ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆʼ ಎಂದು‌ ಪೊಲೀಸರು ತಿಳಿಸಿದ್ದಾರೆ.

ಲೋಕೇಶ್ ವಿರುದ್ಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ, ಕೊಲೆ ಯತ್ನ ಸೇರಿದಂತೆ ಕೆಲ‌ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದು ಬಂದಿದೆ.

ಇನ್ನು, ಘಟನಾ ಸ್ಥಳಕ್ಕೆ ಎಎಸ್ಪಿ ಸುರೇಶ್, ಡಿವೈಎಸ್ಪಿ ದಿನಕರ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News