×
Ad

ಬಿಜೆಪಿ, ಜೆಡಿಎಸ್ ಮೈತ್ರಿ ಪಕ್ಷಗಳ "ಮೈಸೂರು ಚಲೋ" ಪಾದಯಾತ್ರೆಗೆ ಚಾಲನೆ

Update: 2024-08-03 11:09 IST

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ದ ಬಿಜೆಪಿ ಮತ್ತು ಎನ್ ಡಿಎ ಮಿತ್ರ ಪಕ್ಷ ಜೆಡಿಎಸ್ ಜಂಟಿಯಾಗಿ ಆಯೋಜಿಸಿರುವ "ಮೈಸೂರು ಚಲೋ" ಪಾದಯಾತ್ರೆಗೆ ಕೆಂಗೇರಿಯಲ್ಲಿ ಚಾಲನೆ ನೀಡಲಾಯಿತು.

ಕೆಂಗೇರಿ ಕೆಂಪಮ್ಮ ದೇವಸ್ಥಾನದ ಬಳಿ ಇರುವ ಮಂಜುನಾಥ ಕನ್ವೆನ್ಶನ್ ಹಾಲ್ ಬಳಿ ಉದ್ಘಾಟನೆಗೊಂಡ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್ ಡಿ.ಕುಮಾರಸ್ವಾಮಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಚಾಲನೆ ನೀಡಿದರು.

ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ  ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ-ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜೆಡಿಸ್ ಹಾಗೂ ಬಿಜೆಪಿ ಜಂಟಿಯಾಗಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ಗೀತೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಬಿಡುಗಡೆ ಮಾಡಿದರು.

ಪ್ರಸ್ತುತ ಮೈಸೂರು ಚಲೋ ಪಾದಯಾತ್ರೆ 8 ದಿನಗಳ ಕಾಲ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News