×
Ad

ಮೈಸೂರು| ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿರುವ ಸ್ಥಿತಿಯಲ್ಲಿ ಇಬ್ಬರು ಯುವಕರ ಮೃತದೇಹ ಪತ್ತೆ

Update: 2023-12-21 21:01 IST

ಮೈಸೂರು: ಮೈಸೂರು ಜಿಲ್ಲೆ ಕೆ.ಆರ್.ನಗರದ ಬಳಿ ಇಬ್ಬರು ಯುವಕರ ಮೃತದೇಹ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸುಮಾರು 25 ರಿಂದ 30 ವರ್ಷದ ವಯಸ್ಸಿನ ಯುವಕರನ್ನು ಕೊಲೆ ಮಾಡಿ, ಪ್ಲಾಸ್ಟಿಕ್ ಚೀಲ ಸುತ್ತಿ ಸಾಗರಕಟ್ಟೆ ಹಿನ್ನೀರಿನ  ಕೆರೆಯಲ್ಲಿ ಬಿಟ್ಟು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.

ಓರ್ವನ ಕೈ ಮೇಲೆ ನಾಗರಾಜನ್ VR POSTER 4B LEGEND ಎಂದು ಅಚ್ಚೆ ಇದ್ದು.  ಸ್ಥಳಕ್ಕೆ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಹಾಗೂ ಅಡಿಷನಲ್ ಎಸ್ಪಿ ನಂದಿನಿ ಮತ್ತು ಡಿವೈಎಸ್ಪಿ ಕರೀಂರಾವತರ್ ಭೇಟಿ ನೀಡಿ ಪರಿಶೀಲನೆ  ನಡೆಸಿದ್ದಾರೆ. ಈ ಕುರಿತು ಕೆ.ಆರ್.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News