×
Ad

ಮೈಸೂರು: ಸೆ.5ರಂದು ಅರಮನೆಗೆ ಗಜಪಡೆ ಆಗಮನ

Update: 2023-09-03 23:23 IST

ಮೈಸೂರು: ಮೈಸೂರು ದಸರಾ-2023ರ ಅಂಗವಾಗಿ ಅರಮನೆಗೆ ಆಗಮಿಸುತ್ತಿರುವ ಗಜಪಡೆಗೆ ಸ್ವಾಗತ ಕಾರ್ಯಕ್ರಮವು ಮೈಸೂರು ಅರಮನೆ ಮಂಡಳಿ ವತಿಯಿಂದ ಸೆ.5ರಂದು ಮಧ್ಯಾಹ್ನ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಘನ ಉಪಸ್ಥಿತಿಯಲ್ಲಿ, ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಚಾಲನೆ ನೀಡುವರು. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣರಾಜ ಕ್ಷೇತದ್ರ ಶಾಸಕ ಟಿ.ಎಸ್. ಶ್ರೀವತ್ಸ ವಹಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಸಂಸದರಾದ ಪ್ರತಾಪಸಿಂಹ, ಸುಮಲತಾ ಅಂಬರೀಶ್, ವಿ.ಶ್ರೀನಿವಾಸ್ ಪ್ರಸಾದ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News