×
Ad

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

Update: 2023-10-24 17:27 IST

ಚಿತ್ರ- ANI

ಮೈಸೂರು,ಅ.24: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಇದಕ್ಕೂ ಮುನ್ನ ಅರಮನೆ ಹೊರ ಆವರಣದ ಕೋಟೆ ಆಂಜನೇಯ ಗುಡಿಯ ಮುಂದೆ ನಂದಿ ಧ್ವಜಕ್ಕೆ ಮುಖ್ಯಮಂತ್ರಿಗಳು ಪೂಜೆ ಸಲ್ಲಿಸಿದ ಬಳಿಕ ಸ್ತಬ್ದಚಿತ್ರ ಮತ್ತು ಕಲಾತಂಡಗಳ ಮೆರವಣಿಗೆ ಆರಂಭವಾಯಿತು.

750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕುವ ಅಭಿಮನ್ಯು ಆನೆ ಬಿಗಿ ಭದ್ರತೆ ನಡುವೆ ಸಾಗಿದೆ.

ಮೆರವಣಿಗೆ ಅರಮನೆಯಿಂದ ಹೊರಟು ಕೆ.ಆರ್.ವೃತ್ತ, ಸಯ್ಯಾಜಿ ರಾವ್ ರಸ್ತೆ, ಆರ್ಯುವೇದ ಕಾಲೇಜು ವೃತ್ತ. ಬಂಬೂ ಬಜಾರ್ ರಸ್ತೆ, ಹೈವೆ ಸರ್ಕಲ್, ಮೂಲಕ ಹಾದು ಬನ್ನಿ ಮಂಟಪ ರಸ್ತೆ ತಲುಪಿ ಅಲ್ಲಿಂದ ನೇರವಾಗಿ ಬನ್ನಿ ಮಂಟಪದ ಆವರಣದಲ್ಲಿ ಮುಕ್ತಾಯವಾಗಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News