×
Ad

ಸೆ.26 ರಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ‘ಕಾವೇರಿ ಆರತಿ’ : ಎನ್.ಚಲುವರಾಯಸ್ವಾಮಿ

Update: 2025-09-23 18:13 IST

ಎನ್.ಚಲುವರಾಯಸ್ವಾಮಿ

ಬೆಂಗಳೂರು, ಸೆ.23: ಕನ್ನಡ ನಾಡಿನ ಜೀವನದಿ ‘ಕಾವೇರಿ ಆರತಿ’ ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವು ಶ್ರೀರಂಗಪಟ್ಟಣದ ಕೆಆರ್‌ಎಸ್ ನಲ್ಲಿ ಸೆ.26ರಿಂದ ಆಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಶುಕ್ರವಾರ ಸಂಜೆ 5 ಗಂಟೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ‘ಕಾವೇರಿ ಆರತಿ’ ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮಿ, ಸುತ್ತೂರು ಮಠಾಧ್ಯಕ್ಷ ಡಾ.ಶಿವರಾತ್ರಿ ದೇಶಿಕೇಂದ್ರ ಸ್ವಾಮಿ, ಸಿದ್ಧಗಂಗಾ ಮಠದ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮಿ, ವಿಶ್ವ ಒಕ್ಕಲಿಗ ಮಠದ ಪೀಠಾಧ್ಯಕ್ಷ ಶ್ರೀ ನಿಶ್ಚಲಾನಂದನಾಥ ಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂಥೆ ಜನಪ್ರತಿನಿಧಿಗಳು, ನೀರಾವರಿ ನಿಗಮದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಚಲುವರಾಯಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News