ಸಿಎಸ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಎನ್ ರವಿಕುಮಾರ್ ಗೆ ನಿರೀಕ್ಷಣಾ ಜಾಮೀನು ಮಂಜೂರು
Update: 2025-07-09 20:24 IST
ಎನ್. ರವಿಕುಮಾರ್
ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಪದ ಬಳಿಕ ಮಾಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ಗೆ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಜಾಮೀನು ಕೋರಿ ಎ ಎಂಎಲ್ಸಿ ಎನ್.ರವಿಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನಗರದ ಸಿಟಿ ಸಿವಿಲ್ ಕೋರ್ಟ್ ನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.
1 ಲಕ್ಷ ಬಾಂಡ್, ತನಿಖೆಗೆ ಸಹಕರಿಸಬೇಕು, ಮತ್ತೆ ಈ ರೀತಿಯ ಪ್ರಕರಣಗಳಲ್ಲಿ ಭಾಗಿಯಾಗಬಾರದ್ದು, ಸಾಕ್ಷಿ ನಾಶಪಡಿಸದಂತೆ ಷರತ್ತು ವಿಧಿಸಿರುವ ಕೋರ್ಟ್ 10 ದಿನಗಳಲ್ಲಿ ತನಿಖಾಧಿಕಾರಿ ಮುಂದೆ ಹಾಜರಾಗಿವಂತೆ ಸೂಚನೆ ನೀಡಿದೆ.