×
Ad

ನಾಗಮಂಗಲ | ಗಣೇಶ ವಿಸರ್ಜನೆಯ ವೇಳೆ ಕಲ್ಲು ತೂರಾಟ ಪ್ರಕರಣವನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ : ಸಿಎಂ ಸಿದ್ದರಾಮಯ್ಯ

Update: 2024-09-12 13:14 IST

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುರುವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, "ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದರು.

ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ಸಹಕರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News