×
Ad

ನಳಿನ್​ ಕುಮಾರ್ ಕಟೀಲ್ ನೈತಿಕ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ ಒತ್ತಾಯ

Update: 2023-06-28 22:44 IST

ದಾವಣಗೆರೆ : 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ನಳಿನ್​ ಕುಮಾರ್​ ಕಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಹೀ‌ನಾಯ ಸೋಲು ಕಂಡಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಮೋದಿಜಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವೆಲ್ಲ ಪಕ್ಷದ ನಾಯಕರು ಕಾರ್ಯಕರ್ತರನ್ನು ಜೋಡಣೆ ಮಾಡಬೇಕು.' ಎಂದು ಹೇಳಿದರು. 

''ಲೋಕಸಭಾ ಕ್ಷೇತ್ರಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿ''

'ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿ.ಈ ಮಾತನ್ನು ದಾವಣಗೆರೆ ಜಿಲ್ಲೆಯ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಹಿರಿಯರು ಹಾಗೂ ಜನರ ಒತ್ತಾಯಕ್ಕೆ ಮಣಿದು ಹೇಳುತ್ತಿದ್ದೇನೆ' ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News