×
Ad

ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಾಮೂರ್ತಿಯಾಗಿ ಎನ್.​ವಿ ಅಂಜಾರಿಯಾ ಹೆಸರು ಶಿಫಾರಸು

Update: 2024-02-07 22:11 IST

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಗುಜರಾತ್ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರನ್ನು ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಬುಧವಾರ ಶಿಫಾರಸು ಮಾಡಿದೆ.

ಪ್ರಸ್ತುತ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಕರ್ನಾಟಕದವರೇ ಆದ ಪಿ.ಎಸ್.ದಿನೇಶ್ ಕುಮಾರ್ ಇದೇ ತಿಂಗಳು ಫೆ24ರಂದು ನಿವೃತ್ತಿ ಆಗಲಿದ್ದಾರೆ. ಅವರಿಂದ ತೆರವಾಗುವ ಹುದ್ದೆಗೆ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ.

ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ 2011ರ ನವೆಂಬರ್ 21ರಂದು ಗುಜರಾತ್ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆಯುವ ಮುನ್ನ ಗುಜರಾತ್ ಹೈಕೋರ್ಟ್ ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪೆನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ವಕೀಲಿಕೆ ಮಾಡಿದ್ದರು. ಅಲ್ಲದೆ, ಸಿವಿಲ್ ಮತ್ತು ಸಾಂವಿಧಾನಿಕ ಪ್ರಕರಣಗಳಲ್ಲಿ ಅವರು ಪರಿಣತಿ ಹೊಂದಿದ್ದಾರೆ ಎಂದು ಕೊಲಿಜಿಯಂ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News