×
Ad

ವಯನಾಡ್ ದುರಂತ | ಕೇರಳಕ್ಕೆ ಅಗತ್ಯ ನೆರವು: ಸಿಎಂ ಸಿದ್ದರಾಮಯ್ಯ ಭರವಸೆ

Update: 2024-07-31 13:18 IST

ಬೆಂಗಳೂರು, ಜು.31: ಭೂ ಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೂರವಾಣಿ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ವಯನಾಡ್ ಸಂಭವಿಸಿರುವ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದರು.

ಪರಿಹಾರ ಕಾರ್ಯದಲ್ಲಿ ನಮ್ಮ ಸರಕಾರ ನಿಮ್ಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News