×
Ad

ನೀಟ್ : ರಾಜ್ಯದ 87,909 ಅಭ್ಯರ್ಥಿಗಳ ರ‍್ಯಾಂಕ್‌ ಪಟ್ಟಿ ಪ್ರಕಟ

Update: 2025-07-03 21:41 IST

                                                        ಸಾಂದರ್ಭಿಕ ಚಿತ್ರ | PC : freepik.com

ಬೆಂಗಳೂರು : ಪ್ರಸಕ್ತ ಸಾಲಿನ ಯುಜಿನೀಟ್ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ, ವೈದ್ಯಕೀಯ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಹತೆ ಪಡೆದ 87,909 ಅಭ್ಯರ್ಥಿಗಳ ನೀಟ್ ರ‍್ಯಾಂಕ್‌ ಪಟ್ಟಿಯನ್ನು ಮತ್ತು ಪಡೆದ ಅಂಕಗಳ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೆಬ್ ಸೈಟ್ https://cetonline.karnataka.gov.in/kea/ ನಲ್ಲಿ ಪ್ರಕಟಿಸಿದೆ.

ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆ ಹೊರಡಿಸಿದ್ದು, ನೀಟ್‍ನಲ್ಲಿ 670 ಅಂಕ ಪಡೆದ ಅಭ್ಯರ್ಥಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ. 113 ಅಂಕ ಪಡೆದ ಅಭ್ಯರ್ಥಿ ಕೊನೆಯಲ್ಲಿ ಇದ್ದು, ಅವರು ಸಹ ಅರ್ಹತೆ ಪಡೆದಿದ್ದಾರೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಕೊಟ್ಟ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ನೀಟ್ ರೋಲ್ ನಂಬರ್ ನಮೂದಿಸಿ, ನೀಟ್ ಕೌನ್ಸೆಲಿಂಗ್ ಗೆ ನೋಂದಣಿ ಮಾಡಿಕೊಳ್ಳುವುದಕ್ಕೆ ಒಂದೆರಡು ದಿನಗಳಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು. ಹಾಗೆಯೇ ನೀಟ್‍ನಲ್ಲಿ ಅರ್ಹತೆ ಪಡೆದು, ಇದುವರೆಗೂ ಅರ್ಜಿಯನ್ನೇ ಸಲ್ಲಿಸದಿರುವವರಿಗೂ ನೋಂದಣಿಗೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News