×
Ad

ನೇಜಾರು ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಪೊಲೀಸರಿಂದ ವಿವಿಧ ಆಯಾಮಗಳಲ್ಲಿ ತನಿಖೆ

Update: 2023-11-13 11:15 IST

ಉಡುಪಿ, ನ.13: ನೇಜಾರು ತೃಪ್ತಿ ಲೇಔಟ್‌ನಲ್ಲಿ ರವಿವಾರ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಈ ಸಂಬಂಧ ರಚಿಸಲಾದ ಐದು ಪೊಲೀಸ್ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ.

ಈಗಾಗಲೇ ಹಂತಕ ಹೋಗಿರುವ ಮಾರ್ಗದಲ್ಲಿರುವ ಸಿಸಿಟಿವಿ ಫುಟೇಜ್ ಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಆತ ಕೊಲೆಗೈದು ನೇಜಾರಿನಿಂದ ಸಂತೆಕಟ್ಟೆಗೆ, ಸಂತೆಕಟ್ಟೆಯಿಂದ ಉಡುಪಿಗೆ, ಉಡುಪಿಯಿಂದ ಉದ್ಯಾವರದವರೆಗೆ ಹೋಗಿರುವ ಸಿಸಿಟಿವಿ ದೃಶ್ಯಾವಳಿಯನ್ನು ಪೊಲೀಸರು ಕಲೆಹಾಕಿದ್ದಾರೆ. ಆತ ರಿಕ್ಷಾ ಮತ್ತು ಬೇರೆ ಬೇರೆ ಬೈಕಿನಲ್ಲಿ ಪ್ರಯಾಣಿಸಿರುವುದು ಸಿಟಿಟಿವಿ ದೃಶ್ಯಾವಳಿ ಯಿಂದ ಕಂಡುಬಂದಿದೆ.

ಹಣಕಾಸು ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಹಂತಕ ಸುಪಾರಿ ಕಿಲ್ಲರ್ ಎಂಬ ಅನುಮಾನ ವ್ಯಕ್ತವಾಗಿದೆ. ಆ ದಿಕ್ಕಿನಲ್ಲಿ ಪೊಲೀಸ್ ತಂಡ ತನಿಖೆ ಮುಂದುವರೆಸಿದೆ. ಈವರೆಗೆ ಯಾರನ್ನು ಕೂಡ ಬಂಧಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News