×
Ad

ಕಾಯಕ ಯೋಗಿ ಸಿದ್ದರಾಮೇಶ್ವರ ಹೆಸರಿನಲ್ಲಿ ನೂತನ ಪ್ರಶಸ್ತಿ ಸ್ಥಾಪನೆ: ಸಚಿವ ಶಿವರಾಜ ತಂಗಡಗಿ

Update: 2024-01-13 14:07 IST

ಬೆಂಗಳೂರು: ಪ್ರಸಕ್ತ ವರ್ಷದಿಂದ ಜಾರಿಗೆ ಬರುವಂತೆ ಕಾಯಕಯೋಗಿ ಸಿದ್ದರಾಮೇಶ್ವರ ಅವರ ಹೆಸರಿನಲ್ಲಿ ಹೊಸದಾಗಿ ರಾಜ್ಯ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದ್ದು, ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರತಿ ವರ್ಷ ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಕಾಯಕಯೋಗಿ  ಸಿದ್ದರಾಮೇಶ್ವರ ರ ಹೆಸರಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗುವುದು. ಇತರ ರಾಜ್ಯ ಪ್ರಶಸ್ತಿಗಳಿಗೆ ನಿಗದಿಯಾದ ಹಾಗೆ ಪ್ರಶಸ್ತಿ ಮೊತ್ತ 5 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕಗಳನ್ನು ಈ ಪ್ರಶಸ್ತಿ ಒಳಗೊಂಡಿದೆ ಎಂದು ಅವರು ತಿಳಿಸಿದರು.

ಜ.15 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 5ಗೆ ಆಯೋಜಿಸಿರುವ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಈಪ್ರಶಸ್ತಿಯನ್ನು ಮೊದಲನೇ ಬಾರಿಗೆ ಪ್ರದಾನ ಮಾಡಲಿದ್ದಾರೆ.

ಮೊದಲ ಬಾರಿಗೆ ಸ್ಥಾಪಿತವಾಗಿರುವ ಈ ಪ್ರಶಸ್ತಿಗೆ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿಯು ಮಂಡ್ಯ ಜಿಲ್ಲೆಯ ಹಿರಿಯರಂಗ ಕಲಾವಿದ ಪಿ. ಎಸ್. ಶ್ಯಾಮಣ್ಣ ಅವರನ್ನು ಆಯ್ಕೆ ಮಾಡಿದೆ ಎಂದು ಶಿವರಾಜ ತಂಗಡಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


                                                 ಕಾಯಕ ಯೋಗಿ ಸಿದ್ದರಾಮೇಶ್ವರ 

 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News