×
Ad

ಚಳಿಗಾಲದ ಅಧಿವೇಶನದ ಒಳಗೆ ನೂತನ ಸಿಎಂ : ವಿಜಯೇಂದ್ರ

Update: 2024-10-10 21:11 IST

ಸಿದ್ದರಾಮಯ್ಯ/ವಿಜಯೇಂದ್ರ

ಬೆಂಗಳೂರು: ಬರುವ ಕೆಲವು ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದು, ಬೆಳಗಾವಿ ಚಳಿಗಾಲದ ಅಧಿವೇಶನ ನಡೆಯುವುದರೊಳಗೆ ನೂತನ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದ್ದಾರೆ.

ಗುರುವಾರ ಬೆಳಗಾವಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹರ್ಯಾಣ ಚುನಾವಣೆ ಬಿಜೆಪಿ ಜಯದಿಂದ ಹೊಸ ಹುರುಪು ಬಂದಿದೆ. ಜಮ್ಮು-ಕಾಶ್ಮೀರ ರಾಜ್ಯದಲ್ಲಿ 29 ಸ್ಥಾನಗಳನ್ನು ಗೆಲುವು ಸಾಧಿಸುವ ಮೂಲಕ ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಗೆಲುವಿನ ಮುನ್ಸೂಚನೆ ಇದು ಎಂದು ವಿಶ್ಲೇಷಿಸಿದರು.

ವಾಲ್ಮೀಕಿ ನಿಗಮ, ಮುಡಾ ಹಗರಣಗಳಲ್ಲಿ ಸಿಲುಕಿರುವ ಕಾಂಗ್ರೆಸ್ ಸರಕಾರ ಕೋಮಾದಲ್ಲಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಗುದ್ದಲಿ ಪೂಜೆ ನೆರವೇರುತ್ತಿಲ್ಲ. ಭ್ರಷ್ಟಾಚಾರ ಸಾಬೀತಾಗಿ ನಿವೇಶನ ಮರಳಿ ಕೊಟ್ಟು ತಪ್ಪು ಒಪ್ಪಿಕೊಂಡು ಹಾಗೇ ಮುಖ್ಯಮಂತ್ರಿಯವರು ರಾಜೀನಾಮೆ ಕೊಡುತ್ತಾರೆ ಎಂದು ಅವರು ತಿಳಿಸಿದರು.

ಎಲ್ಲ ಸಚಿವರು ಸಿದ್ದರಾಮಯ್ಯರೇ ಈ ಅವಧಿಗೆ ಸಿಎಂ ಎಂದು ಹೇಳಿದರೂ, ಮುಖ್ಯಮಂತ್ರಿ ಕುರ್ಚಿಗೆ ಹಲವಾರು ಮುಖಂಡರು ಟವಲ್ ಹಾಕುವ ಕೆಲಸ ಮಾತ್ರ ಮಾಡುತ್ತಿದ್ದಾರೆ. ಯಾವ ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆ ನಂತರ ಜನರ ಕೈಗೆ ಸಿಗುತ್ತಿಲ್ಲ. ಜನ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News