×
Ad

ವನ್ಯಜೀವಿ ವಸ್ತುಗಳ ಸಂಗ್ರಹ, ಮಾರಾಟದ ವಿರುದ್ಧ ಇನ್ನಷ್ಟು ಕಠಿಣ ನಿಯಮಗಳನ್ನು ರೂಪಿಸಲು ಹೊಸ ಸಮಿತಿ ರಚನೆ

Update: 2023-10-27 18:07 IST

Photo -Twitter@KarnatakaVarthe (ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಂಚಿಕೊಂಡಿರುವ ಪೋಸ್ಟರ್)

ಬೆಂಗಳೂರು: ವನ್ಯಜೀವಿ ವಸ್ತುಗಳ ಸಂಗ್ರಹ, ಮಾರಾಟದ ವಿರುದ್ಧ ಇನ್ನಷ್ಟು ಕಠಿಣ ನಿಯಮಗಳನ್ನು ರೂಪಿಸಲು ರಾಜ್ಯ ಸರಕಾರ ವನ್ಯಜೀವಿ ವಿಭಾಗದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

ಸಮಿತಿಯಲ್ಲಿ ಬೆಂಗಳೂರು, ಹಾಸನ, ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಬೆಂಗಳೂರು ನಗರ, ತುಮಕೂರು, ಕೊಪ್ಪ ಹಾಗೂ ಶಿವಮೊಗ್ಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸದಸ್ಯರಾಗಿರುತ್ತಾರೆ.

ʼ1926 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿʼ

ವನ್ಯಜೀವಿಗಳ ಸಂರಕ್ಷಣಾ ಕಾಯಿದೆ 1972ರ ಪ್ರಕಾರ ವನ್ಯಜೀವಿಗಳ ಅಂಗಾಂಗ, ಅವಶೇಷಗಳ ಮಾರಾಟ ಅಥವಾ ಬಳಕೆಗೆ ಸಂಪೂರ್ಣ ನಿಷೇಧವಿದೆ. ಅರಣ್ಯ ಇಲಾಖೆಯಲ್ಲಿ 1926 ಎಂಬ ಸಂಖ್ಯೆಯ ಸಹಾಯವಾಣಿ ಇದೆ. ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡಿ ಅಪರಾಧಗಳ ಬಗ್ಗೆ ದೂರು ದಾಖಲಿಸಬಹುದು. ಇಲಾಖೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಅವಕಾಶವಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News